ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.