Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಸರ್ವೇಶ್ವರನಿಗೆ ಆ ದಿನ ಬಲಿದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನಿಗೋಸ್ಕರ ಆ ದಿವಸ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಯಜ್ಞ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸಮಯದಲ್ಲಿ ಅವರು ಏಳುನೂರು ಹೋರಿಗಳನ್ನೂ ಏಳುಸಾವಿರ ಆಡುಕುರಿಗಳನ್ನೂ, ಯೆಹೋವನಿಗೆ ಸಮರ್ಪಿಸಿದರು. ಇವುಗಳನ್ನು ಆಸನ ಸೈನ್ಯವು ಶತ್ರುಗಳಿಂದ ಸುಲಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯೆಹೋವ ದೇವರಿಗೆ ಬಲಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:11
10 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.


ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.


ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು.


ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.


ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.


ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.


ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು