Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅವರು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪಿತೃಗಳ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:12
22 ತಿಳಿವುಗಳ ಹೋಲಿಕೆ  

ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,


ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:


ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.


‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,


ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.


ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,


ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.


ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು