2 ಪೂರ್ವಕಾಲ ವೃತ್ತಾಂತ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ಪ್ರಮಾಣದ ನಿವಿುತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾಕಡೆಗಳಲ್ಲಿಯೂ ಸಮಾಧಾನವನ್ನನುಗ್ರಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು. ಅಧ್ಯಾಯವನ್ನು ನೋಡಿ |