Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನೀವು ಶಕ್ತರಾಗಿರಿ, ನಿರಾಶರಾಗಬೇಡಿರಿ; ಯಾಕೆಂದರೆ ನಿಮ್ಮ ಒಳ್ಳೆಯ ಕೆಲಸಕ್ಕೆ ನಿಮಗೆ ಪ್ರತಿಫಲ ದೊರೆಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:7
35 ತಿಳಿವುಗಳ ಹೋಲಿಕೆ  

ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.


ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.


ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.


ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.


ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.


“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.


ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.


ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.


“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.


ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು