Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವದನ್ನು ನೋಡಿ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದದೇಶದಲ್ಲಿ ಇಳಕೊಂಡಿದ್ದ ಎಫ್ರಾಯೀಮ್ ಮನಸ್ಸೆ ಸಿಮೆಯೋನ್ ಕುಲಗಳವರನ್ನೂ ಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:9
15 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.


ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,


ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.


ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.


“ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.


“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.


ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು