2 ಪೂರ್ವಕಾಲ ವೃತ್ತಾಂತ 16:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಯೇಲ್ ರಾಜ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿಬರುವುದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಸನ ಆಳಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರಾಯೇಲ್‍ರಾಜನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಬಂದು ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರೇಲಿನ ರಾಜನಾದ ಬಾಷನು ಆಸನ ಸಂಗಡ ಯುದ್ಧಕ್ಕೆ ಹೊರಟನು. ಅವನು ರಾಮ ಎಂಬ ಪಟ್ಟಣವನ್ನು ಕೋಟೆಯನ್ನಾಗಿ ಪರಿವರ್ತಿಸಿ, ಯೆಹೂದದ ರಾಜನಾದ ಆಸನ ಬಳಿಗೆ ಹೋಗುವುದಕ್ಕಾಗಲಿ ಬರುವುದಕ್ಕಾಗಲಿ ಯಾರಿಗೂ ಆಗದಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು, ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಪಟ್ಟಣದ ಸುತ್ತಲೂ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |