Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರೋಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:4
14 ತಿಳಿವುಗಳ ಹೋಲಿಕೆ  

ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.


ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.


ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.


ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.


ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.


ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು