2 ಪೂರ್ವಕಾಲ ವೃತ್ತಾಂತ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ - ನೀನು ನಿನ್ನ ದೇವರಾದ ಯೆಹೋವನ ಮೇಲೆ ಆತುಕೊಳ್ಳದೆ ಅರಾಮ್ಯರ ಅರಸನ ಮೇಲೆ ಆತುಕೊಂಡದರಿಂದ ಅರಾಮ್‍ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.