Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗೋತ್ರಗಳ ಪ್ರಕಾರ ಲೆಕ್ಕಿತರಾದ ಈ ಸೇನಾನಾಯಕರ ಕ್ರಮಬದ್ಧ ಪಟ್ಟಿಯಿದು; ಅದ್ನ - ಇವನು ಯೆಹೂದ್ಯರಲ್ಲಿ ಮೂರು ಲಕ್ಷಮಂದಿ ರಣವೀರರ ಅಧಿಪತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಇವರ ಗೋತ್ರಪ್ರಧಾನರು ಯಾರಂದರೆ - ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ರಣವೀರರ ಅಧಿಪತಿಯಾದ ಅದ್ನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:14
11 ತಿಳಿವುಗಳ ಹೋಲಿಕೆ  

ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.


ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.


ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.


ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.


“ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.


“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು.


ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು