Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಯೆಹೂದದ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳಲ್ಲಿಯೂ ಸೈನ್ಯವನ್ನಿರಿಸಿ ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ಕಿತ್ತುಕೊಂಡಿದ್ದ ಎಫ್ರಾಯೀಮ್ಯರ ಪಟ್ಟಣದಲ್ಲಿಯೂ ಅಧಿಕಾರಿಗಳನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:2
6 ತಿಳಿವುಗಳ ಹೋಲಿಕೆ  

ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.


ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.


ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.


ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.


ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು