Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇವನು ಸರ್ವೇಶ್ವರನ ಮಾರ್ಗದಲ್ಲಿ ನಡೆದು, ಧೈರ್ಯದಿಂದ ಜುದೇಯ ನಾಡಿನಲ್ಲಿದ್ದ ಪೂಜಾಸ್ಥಳಗಳನ್ನೂ ಆಶೇರ ವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದದೇಶದಲ್ಲಿದ್ದ ಪೂಜಾಸ್ಥಳಗಳನ್ನೂ ಅಶೇರವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:6
16 ತಿಳಿವುಗಳ ಹೋಲಿಕೆ  

ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.


ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.


ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.


ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.


ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?


ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.


ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,


ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು