Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ [ತಲೆಗೆ ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬದಾಗಿ ಯೆಹೋವನು ಹೇಳುತ್ತಾನೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚಿದ್ಕೀಯನು ಕೆನಾನನ ಮಗ. ಚಿದ್ಕೀಯನು ಕಬ್ಬಿಣದ ಕೊಂಬುಗಳನ್ನು ತಯಾರಿಸಿ, “ಇದು ಯೆಹೋವನ ನುಡಿ. ಈ ಕಬ್ಬಿಣದ ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ನಾಶಮಾಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:10
15 ತಿಳಿವುಗಳ ಹೋಲಿಕೆ  

ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.


ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.


ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,


ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.


ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು