Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ನನ್ನ ದೇವರು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಮೀಕಾಯೆಹುವು, “ಯೆಹೋವನಾಣೆ, ಆತನು ಹೇಳಿದ್ದನ್ನೇ ನಾನು ಹೇಳುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:13
17 ತಿಳಿವುಗಳ ಹೋಲಿಕೆ  

ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.


‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’


ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”


ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.


ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.


ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು