Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಇಸ್ರಯೇಲರ ಅರಸು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ? ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲಿನ ರಾಜನಾದ ಅಹಾಬನು ಯೆಹೋಷಾಫಾಟನಿಗೆ, “ಮೀಕಾಯೆಹುವು ನನ್ನ ಬಗ್ಗೆ ಯೆಹೋವನಿಂದ ಒಳ್ಳೆಯ ಸಂದೇಶವನ್ನು ಕೊಡುವದೇ ಇಲ್ಲವೆಂದು ನಿನಗೆ ಹೇಳಿದೆನಲ್ಲಾ? ಅವನಲ್ಲಿ ನನ್ನ ವಿಷಯವಾಗಿ ಕೆಟ್ಟ ಸಂದೇಶವೇ ಇರುವದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:17
6 ತಿಳಿವುಗಳ ಹೋಲಿಕೆ  

ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.


ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.


ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.


ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು