Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೀಕಾಯೆಹುವು, “ಯೆಹೋವನಿಂದ ಬಂದ ಸಂದೇಶವನ್ನು ಕೇಳು. ಯೆಹೋವನು ಸಿಂಹಾಸನದಲ್ಲಿ ಕುಳಿತಿರುವದನ್ನು ನಾನು ಕಂಡೆನು. ಅವನ ಎಡಬಲಗಳಲ್ಲಿ ಪರಲೋಕದ ಸೈನ್ಯವು ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:18
17 ತಿಳಿವುಗಳ ಹೋಲಿಕೆ  

“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.


“ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,


ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.


ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.


ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,


ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.


ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.


ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.


ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.


ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು