2 ಪೂರ್ವಕಾಲ ವೃತ್ತಾಂತ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಹಾಬನು ಅವನಿಗೂ ಅವನೊಡನೆ ಬಂದ ಜನರಿಗೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣವನ್ನೇರ್ಪಡಿಸಿದನು. ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಲು ತನ್ನ ಸಂಗಡ ಬರಬೇಕೆಂದು ಅವನನ್ನು ಪ್ರೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕೆಲವು ವರುಷಗಳಾದನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದಾಗ ಅಹಾಬನು ಅವನಿಗೋಸ್ಕರವೂ ಅವನೊಡನೆ ಬಂದ ಜನರಿಗೋಸ್ಕರವೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣಮಾಡಿಸಿ ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್‍ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೆಲವು ವರ್ಷಗಳ ನಂತರ ಯೆಹೋಷಾಫಾಟನು ಸಮಾರ್ಯ ಪಟ್ಟಣದಲ್ಲಿ ಅಹಾಬನನ್ನು ಸಂಧಿಸಲು ಹೋದನು. ಯೆಹೋಷಾಫಾಟನಿಗೂ ಅವನೊಂದಿಗೆ ಬಂದಿದ್ದ ಜನರಿಗೂ ಅಹಾಬನು ಅನೇಕ ದನಕುರಿಗಳನ್ನು ವಧಿಸಿ ಔತಣಮಾಡಿಸಿದನು. ರಾಮೋತ್‌ಗಿಲ್ಯೋದ್ ಪಟ್ಟಣದ ಮೇಲೆ ಯುದ್ಧಮಾಡಲು ಅಹಾಬನು ಯೆಹೋಷಾಫಾಟನನ್ನು ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕೆಲವು ವರ್ಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು. ಆಗ ಅಹಾಬನು ಅವನಿಗೋಸ್ಕರವೂ, ಅವನ ಸಂಗಡ ಇದ್ದ ಜನರಿಗೋಸ್ಕರವೂ ಅನೇಕ ಕುರಿದನಗಳನ್ನೂ ವಧಿಸಿ ಔತಣವನ್ನೇರ್ಪಡಿಸಿ, ತನ್ನ ಸಂಗಡ ಯುದ್ಧಕ್ಕಾಗಿ ಗಿಲ್ಯಾದಿನ ರಾಮೋತಿಗೆ ಹೋಗಲು ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿ |