Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಮೀಕಾಯೆಹುವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಚಿದ್ಕೀಯನು ಮುಂದೆ ಬಂದು ಮೀಕಾಯೆಹುವಿನ ಕೆನ್ನೆಗೆ ಹೊಡೆದು, “ಮೀಕಾಯೆಹುವೇ, ಯೆಹೋವನ ಆತ್ಮನು ನಿನ್ನೊಂದಿಗೆ ಮಾತಾಡಲು ನನ್ನ ಬಳಿಯಿಂದ ಬಂದಾಗ ಯಾವ ಕಡೆಗೆ ಹೋದನು?” ಎಂದು ಗೇಲಿಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:23
13 ತಿಳಿವುಗಳ ಹೋಲಿಕೆ  

ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.


ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು