Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮೀಕಾಯೆಹುವು, “ಚಿದ್ಕೀಯನೇ, ನೀನು ಒಳಕೋಣೆಯೊಳಗೆ ಅವಿತು ಕುಳಿತಿರುವ ದಿನದಲ್ಲಿ ನಿನಗೆ ತಿಳಿಯುವದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:24
8 ತಿಳಿವುಗಳ ಹೋಲಿಕೆ  

ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.


ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು