2 ಪೂರ್ವಕಾಲ ವೃತ್ತಾಂತ 18:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
3 ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.
3 ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.
3 ಇಸ್ರಾಯೇಲ್ಯರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು - ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೇಯಲ್ಲವೋ. ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು ಎಂದು ಉತ್ತರಕೊಟ್ಟು
3 ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.
3 ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.
ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.
ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.