Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿ ಇರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗೆನ್ನಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗೆ ಹೇಳಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:7
30 ತಿಳಿವುಗಳ ಹೋಲಿಕೆ  

ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.


“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.


ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?


ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ


ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;


ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.


ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.


ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.


ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು