Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಅಹಾಬನು ತನ್ನ ಸೇವಕರಲ್ಲೊಬ್ಬನನ್ನು ಕರೆದು, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:8
10 ತಿಳಿವುಗಳ ಹೋಲಿಕೆ  

ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ


“ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ” ಎಂದು ಹೇಳಿದನು.


ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.


ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.


ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು