2 ಪೂರ್ವಕಾಲ ವೃತ್ತಾಂತ 19:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಗೋ, ಯೆಹೋವನ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯಕಾರ್ಯ ಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದಕುಲಪ್ರಭುವೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನ ಲೇಖಕರು; ಧೈರ್ಯದಿಂದ ಕೆಲಸಮಾಡಿರಿ, ಯೆಹೋವನು ಸಜ್ಜನರ ಸಹಾಯಕನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು. ಅಧ್ಯಾಯವನ್ನು ನೋಡಿ |