Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:2
40 ತಿಳಿವುಗಳ ಹೋಲಿಕೆ  

ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.


ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.


ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.


(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)


ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,


ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,


ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.


“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.


ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.


ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.


ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.


ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.


ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.


‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.


ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.


ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.


ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.


ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು