Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:3
16 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.


ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.


ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.


ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.


ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.


ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.


ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.


ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.


ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು