Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸವು ಯಾವದಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:9
8 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.


ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.


ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು