Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮರ ಕಡಿಯುವ ನಿನ್ನ ಆಳುಗಳಿಗಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿ, ಎರಡು ಸಾವಿರ ಮೆಟ್ರಿಕ್ ಟನ್ ಜವೆಗೋದಿ, ನಾಲ್ಕು ಲಕ್ಷ ಲೀಟರ್ ದ್ರಾಕ್ಷಾರಸ ಹಾಗೂ ನಾಲ್ಕು ಲಕ್ಷ ಲೀಟರ್ ಎಣ್ಣೆ ಇವುಗಳನ್ನು ಕೊಡುವೆನು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮರಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ ಗೋದಿ, ಇಪ್ಪತ್ತು ಸಾವಿರ ಕೋರ್ ಜವೆಗೋದಿ, ಇಪ್ಪತ್ತು ಸಾವಿರ ಬತ್ ದ್ರಾಕ್ಷಾರಸ, ಇಪ್ಪತ್ತು ಸಾವಿರ ಬತ್ ಎಣ್ಣೆ ಇವುಗಳನ್ನು ಕೊಡುವೆನೆಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಜನರು ಮರಗಳನ್ನು ಕಡಿದು ಸಾಗಿಸುವ ಕಾರ್ಯಕ್ಕೆ ನಾನು ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಗೋಧಿಯನ್ನೂ ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಜವೆಗೋಧಿಯನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ದ್ರಾಕ್ಷಾರಸವನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮರ ಕಡಿಯುವ ನಿನ್ನ ಸೇವಕರಿಗಾಗಿ, ಎರಡು ಸಾವಿರ ಟನ್ ಗೋಧಿಯನ್ನೂ, ಮೂರು ಸಾವಿರ ಟನ್ ಜವೆಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ದ್ರಾಕ್ಷಾರಸವನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:10
11 ತಿಳಿವುಗಳ ಹೋಲಿಕೆ  

ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.


ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.


ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.


ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.


ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.


ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.


ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.


ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.


ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು