2 ಪೂರ್ವಕಾಲ ವೃತ್ತಾಂತ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟುಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಹೀರಾಮನು, “ಯೆಹೋವ ದೇವರಿಗೋಸ್ಕರ ಆಲಯವನ್ನೂ ತನ್ನ ರಾಜ್ಯಕ್ಕೋಸ್ಕರ ಅರಮನೆಯನ್ನೂ ಕಟ್ಟಿಸುವುದಕ್ಕೆ ಅರಸನಾದ ದಾವೀದನಿಗೆ ಬುದ್ಧಿ ವಿವೇಚನೆಯುಳ್ಳ ಒಬ್ಬ ಮಗನನ್ನು ಕೊಟ್ಟಿದ್ದಾರೆ; ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿ |