2 ಪೂರ್ವಕಾಲ ವೃತ್ತಾಂತ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈಗ ನಾನು ಜ್ಞಾನಿಯು, ಕಲಾ ಪ್ರವೀಣನೂ ಆದ ಹೂರಾಮಾಬೀ ಎಂಬುವವನನ್ನು ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಈಗ ಜ್ಞಾನಿಯೂ ಕಲಾಪ್ರವೀಣನೂ ಆದ ಒಬ್ಬ ವ್ಯಕ್ತಿಯನ್ನು ಕಳುಹಿಸುತ್ತೇನೆ; ಇವನ ಹೆಸರು ಹೂರಾಮಾಬೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಈಗ ಜ್ಞಾನವಿವೇಕಗಳುಳ್ಳ ಪುರುಷನನ್ನು ಕಳುಹಿಸುತ್ತೇನೆ; ಅವನ ಹೆಸರು ಹೂರಾಮಾಬೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಹೂರಾಮಾಬೀ ಎಂಬ ಹೆಸರಿನ ಅನುಭವಶಾಲಿಯಾದ ಕುಶಲಕರ್ಮಿಯನ್ನು ನಿನಗೋಸ್ಕರ ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಈಗ ನಾನು ಜ್ಞಾನಿಯೂ, ಕಲಾ ಪ್ರವೀಣನೂ ಆದ ಹೂರಾಮ ಅಬೀ ಎಂಬ ಒಬ್ಬನನ್ನು ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿ |
ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.
ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ