2 ಪೂರ್ವಕಾಲ ವೃತ್ತಾಂತ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
14 ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ
14 ಇವನು ದಾನ್ ಕುಲದ ಒಬ್ಬ ಸ್ತ್ರೀಯ ಮಗ; ಅವನ ತಂದೆ ಟೈರಿನವನು. ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ ಊದಾ, ನೀಲಿ, ಕೆಂಪುವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವುದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸ ಮಾಡುವುದಕ್ಕೂ ತನಗೆ ಒಪ್ಪಿಸಲಾಗುವ ಎಲ್ಲಾ ಕಲಾತ್ಮಕ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನೀನೂ ನಿನ್ನ ತಂದೆ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.
14 ಅವನು ದಾನ್‍ಕುಲದ ಸ್ತ್ರೀಯ ಮಗನು; ಅವನ ತಂದೆ ತೂರಿನವನು. ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಇವುಗಳ ಕೆಲಸವನ್ನು ಮಾಡುವದಕ್ಕೂ ಧೂಮ್ರ ನೀಲರಕ್ತವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವದಕ್ಕೂ ಸಮರ್ಥನು. ನೀನೂ ನಿನ್ನ ತಂದೆಯಾದ ದಾವೀದನೂ ಗೊತ್ತುಮಾಡಿದ ಜಾಣರೊಡನೆ ಅವನು ಕೆಲಸಮಾಡಲಿ.
14 ಅವನ ತಾಯಿಯು ದಾನ್ ಕುಟುಂಬದವಳು, ತಂದೆಯು ತೂರ್ ಪಟ್ಟಣದವನು. ಅವನು ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ ಇವುಗಳ ಕೆಲಸಗಳಲ್ಲಿ ತುಂಬ ಚತುರನು. ಅಲ್ಲದೆ ನೀಲಿ, ಕೆಂಪು ಧೂಮ್ರವರ್ಣದ ಬಟ್ಟೆಗಳನ್ನು ಮತ್ತು ಬೆಲೆಬಾಳುವ ಲಿನಿನ್ ಬಟ್ಟೆಗಳನ್ನು ನೇಯುವುದರಲ್ಲಿ ನಿಪುಣನಾಗಿದ್ದಾನೆ. ನೀನು ಏನೇ ಹೇಳಿದರೂ ಅವನು ಮಾಡಿಕೊಡುವನು. ನಿನ್ನ ಮತ್ತು ದಾವೀದನ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಕೆಲಸ ಮಾಡುವನು.
14 ಅವನು ದಾನನ ಪುತ್ರಿಯರಲ್ಲಿರುವ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ಟೈರಿನವನು. ಅವನು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಕಲ್ಲು, ಮರ, ಧೂಮ್ರವರ್ಣ, ನೀಲವರ್ಣ, ನಯವಾದ ನಾರಿನ ವಸ್ತ್ರ, ರಕ್ತವರ್ಣ ಇವುಗಳಲ್ಲಿ ಕೆಲಸವನ್ನು ಮಾಡುವುದಕ್ಕೂ ತರಬೇತಿಯನ್ನು ಹೊಂದಿದ್ದನು. ತನಗೆ ಒಪ್ಪಿಸಲಾಗುವ ಎಲ್ಲಾ ತರಹದ ಕೆತ್ತನೆಯ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನಿನ್ನ ತಂದೆಯೂ ನನ್ನ ಒಡೆಯನಾದ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.
ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.