Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸೊಲೊಮೋನನು, ತನ್ನ ತಂದೆ ದಾವೀದನು ಮಾಡಿಸಿದ ಜನಗಣತಿಯ ಆಧಾರದಿಂದ, ಇಸ್ರಯೇಲ್ ನಾಡಿನಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕಿಸಿದನು. ಅವರು ಒಂದು ಲಕ್ಷ ಐವತ್ತಮೂರು ಸಾವಿರದ ಆರುನೂರು ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಖಾನೇಷುಮಾರಿಯ ಆಧಾರದಿಂದ ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕಿಸಲು ಒಂದು ಲಕ್ಷ ಐವತ್ತಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಮೇಲೆ ಸೊಲೊಮೋನನು ತನ್ನ ರಾಜ್ಯದಲ್ಲಿದ್ದ ಎಲ್ಲಾ ಪರದೇಶಸ್ಥರನ್ನು ಲೆಕ್ಕಿಸಿದನು. ಸೊಲೊಮೋನನ ತಂದೆಯಾದ ದಾವೀದನು ಮಾಡಿದ ಜನಗಣತಿಯ ನಂತರ ಈ ಜನಗಣತಿಯನ್ನು ಮಾಡಲಾಯಿತು. ಅವರಲ್ಲಿ ಒಂದು ಲಕ್ಷದ ಐವತ್ತ ಮೂರು ಸಾವಿರದ ಆರುನೂರು ಮಂದಿ ಪರದೇಶದವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಮೇಲೆ ಸೊಲೊಮೋನನು ತನ್ನ ತಂದೆ ದಾವೀದನು ಮಾಡಿಸಿದ ಜನಗಣತಿಯ ಆಧಾರದಿಂದ, ಇಸ್ರಾಯೇಲ್ ದೇಶದಲ್ಲಿದ್ದ ಪ್ರವಾಸಿಗಳಾಗಿದ್ದ ಇತರ ಜನರ ಜನಗಣತಿ ಮಾಡಿಸಿದ ನಂತರ, ಇತರ ಜನರ ಒಟ್ಟು ಸಂಖ್ಯೆ 1,53,600 ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:17
5 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.


ಅದಕ್ಕಾಗಿ ಹೊರೆ ಹೊರುವ ಎಪ್ಪತ್ತು ಸಾವಿರ ಜನರನ್ನು, ಎಂಭತ್ತು ಸಾವಿರ ಜನರು ಕಲ್ಲುಗಣಿಗಳಲ್ಲಿ ಕೆಲಸ ಮಾಡುವವರನ್ನು, ಇವರ ಮೇಲ್ವೀಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಲ್ವೀಚಾರಕರನ್ನು ಸೊಲೊಮೋನನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು