Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:3
18 ತಿಳಿವುಗಳ ಹೋಲಿಕೆ  

ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.


ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.


ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.


“ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ


ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.


“‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.


“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,


ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.


ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.


ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು