2 ಪೂರ್ವಕಾಲ ವೃತ್ತಾಂತ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಲ್ಲಿ ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ನಾನು ಆತನ ಸನ್ನಿಧಿಯಲ್ಲಿ ಧೂಪಹಾಕುವ ಉದ್ದೇಶದಿಂದ ಹೊರತು ಆತನ ವಾಸಕ್ಕಾಗಿ ಆಲಯವನ್ನು ಕಟ್ಟಿಸುವದಕ್ಕೆ ಎಷ್ಟರವನು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯಾವನೂ ದೇವರಿಗೆ ಆಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕೆಂದರೆ, ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಆಲಯವನ್ನು ಕಟ್ಟಲಾರೆ. ನಾನು ಆತನಿಗೆ ಆಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಅವರಿಗೋಸ್ಕರ ಆಲಯವನ್ನು ಕಟ್ಟಿಸಲು ಸಮರ್ಥನಾದವನು ಯಾರು? ಆಕಾಶವೂ ಉನ್ನತೋನ್ನತ ಆಕಾಶವೂ ಅವರಿಗೆ ಸಾಲದು. ಅವರ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಅವರಿಗೆ ಆಲಯವನ್ನು ಕಟ್ಟಿಸಲು ನಾನು ಎಷ್ಟರವನು? ಅಧ್ಯಾಯವನ್ನು ನೋಡಿ |