Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:12
24 ತಿಳಿವುಗಳ ಹೋಲಿಕೆ  

ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.


ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.


ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’


ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.


ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.


ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.


ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು