2 ಪೂರ್ವಕಾಲ ವೃತ್ತಾಂತ 20:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು - ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವದನ್ನು ಕೇಳಿರಿ! ಈ ಮಹಾಸಮೂಹದ ನಿವಿುತ್ತವಾಗಿ ಕಳವಳಗೊಳ್ಳಬೇಡಿರಿ, ಹೆದರಬೇಡಿರಿ, ಯುದ್ಧವು ನಿಮ್ಮದಲ್ಲ, ದೇವರದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೀಯೇಲನು ಅವರಿಗೆ, “ರಾಜನಾದ ಯೆಹೋಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಹೀಗೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆಗೊಳಗಾಗಬೇಡಿ. ಯಾಕೆಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ. ಅಧ್ಯಾಯವನ್ನು ನೋಡಿ |