2 ಪೂರ್ವಕಾಲ ವೃತ್ತಾಂತ 20:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇವಿುನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |