2 ಪೂರ್ವಕಾಲ ವೃತ್ತಾಂತ 20:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, “ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು. ಅಧ್ಯಾಯವನ್ನು ನೋಡಿ |
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.