Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ಜುದೇಯದ ಮೇಲೆ ಯುದ್ಧಕ್ಕೆ ಬಂದು, ನಾಡಿನೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲ ಸೊತ್ತನ್ನೂ ಅರಸನ ಮಡದಿ ಮಕ್ಕಳನ್ನೂ ಸೆರೆಗೆ ಒಯ್ದರು. ಅವನಿಗೆ ಕಿರಿಯಮಗ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು ದೇಶದೊಳಗೆ ನುಗ್ಗಿ ಅರಮನೆಯಲ್ಲಿ ಸಿಕ್ಕಿದ ಎಲ್ಲಾ ಸೊತ್ತನ್ನೂ ಅರಸನ ಹೆಂಡರುಮಕ್ಕಳನ್ನೂ ಸೆರೆಯೊಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:17
8 ತಿಳಿವುಗಳ ಹೋಲಿಕೆ  

ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.


ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,


ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.


ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.


ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.


ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು