Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರು ಯೆಹೂದ್ಯರ ಅರಸ ಯೆಹೋಷಾಫಾಟನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್ ಮತ್ತು ಶೆಫಟ್ಯ. ಇವರೆಲ್ಲಾ ಯೆಹೂದದ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:2
10 ತಿಳಿವುಗಳ ಹೋಲಿಕೆ  

ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.


ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.


ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.


ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.


ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.


ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.


ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.


ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು