2 ಪೂರ್ವಕಾಲ ವೃತ್ತಾಂತ 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿ |
ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.