Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಆರು ವರುಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವಾಷನು ಆರು ವರ್ಷಗಳ ಕಾಲ ಯಾಜಕರೊಂದಿಗೆ ದೇವಾಲಯದೊಳಗೆ ಯಾರಿಗೂ ತಿಳಿಯದಂತೆ ಇದ್ದನು. ಆ ದಿನಗಳಲ್ಲಿ ಅತಲ್ಯಳು ರಾಣಿಯಾಗಿ ದೇಶವನ್ನು ಆಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆಯೇ ಇವನು ಅವರ ಸಂಗಡ ಆರು ವರ್ಷ ದೇವರ ಆಲಯದಲ್ಲಿ ಗುಪ್ತವಾಗಿದ್ದನು. ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:12
9 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.


ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.


ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.


ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು