Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದರು. ಈ ಕಾರಣ ಸರ್ವೇಶ್ವರನಿಗೆ ದ್ರೋಹಿಯಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದದರಿಂದ ಇವನು ಯೆಹೋವನಿಗೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ದೃಷ್ಟಿಯಲ್ಲಿ ಅಹಜ್ಯನು ದುಷ್ಕೃತ್ಯಗಳನ್ನು ಮಾಡಿದನು. ಅಹಜ್ಯನ ತಂದೆಯು ಸತ್ತುಹೋದ ಬಳಿಕ ಅಹಾಬನ ಕುಟುಂಬದವರು ಅಹಜ್ಯನಿಗೆ ಕೆಟ್ಟ ಸಲಹೆಗಳನ್ನು ಕೊಟ್ಟರು. ಆ ಕೆಟ್ಟ ಸಲಹೆಗಳು ಅವನನ್ನು ಮರಣಕ್ಕೆ ನಡೆಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:4
9 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.


ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.


ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.


ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.


ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.


ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು