Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಯೋಗದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮಮಾಡುವದಕ್ಕೋಸ್ಕರ ಯೇಹುವಿಗೆ ರಾಜ್ಯಾಭಿಷೇಕ ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:7
18 ತಿಳಿವುಗಳ ಹೋಲಿಕೆ  

ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.


ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.


ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.


ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.


‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.


ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.


ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು