2 ಪೂರ್ವಕಾಲ ವೃತ್ತಾಂತ 23:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದರು. ಕೂಡಲೆ ಜನರು - ಅರಸನು ಚಿರಂಜೀವಿಯಾಗಿರಲಿ ಎಂದು ಹರಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು. ಅಧ್ಯಾಯವನ್ನು ನೋಡಿ |
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.