Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಲ್ಲಿ ಅರಸನು ಬಾಗಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನರ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:13
23 ತಿಳಿವುಗಳ ಹೋಲಿಕೆ  

ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.


ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.


ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.


ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.


ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.


ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.


ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.


ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.


ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.


ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.


ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.


ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು