2 ಪೂರ್ವಕಾಲ ವೃತ್ತಾಂತ 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರಕೊಂಡು ಹೋಗಿ ಅವರಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದುಕೊಂಡು ಹೋಗಿ, ಯಾರಾದರೂ ಆಕೆಯನ್ನು ಹಿಂಬಾಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.