Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಿಲಿನ ತನಕ ಒಯ್ದು, ಅಲ್ಲಿ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಲಿನ ತನಕ ಒಯ್ದು ಅಲ್ಲಿ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅರಮನೆಗೆ ಹೋಗುವ ದಾರಿಯಲ್ಲಿ ಕುದುರೆ ಬಾಗಿಲಿನ ಹತ್ತಿರ ಸಿಪಾಯಿಗಳು ಆಕೆಯನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:15
12 ತಿಳಿವುಗಳ ಹೋಲಿಕೆ  

ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.


“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು