2 ಪೂರ್ವಕಾಲ ವೃತ್ತಾಂತ 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇವಿುಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗೋಸ್ಕರ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇವಿುಸಿದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆ ಮಾಡುವದೇ ಅವರ ಕರ್ತವ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು. ಅಧ್ಯಾಯವನ್ನು ನೋಡಿ |