Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್‍ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈಗ ನೀವು ಮಾಡತಕ್ಕದ್ದೇನಂದರೆ - ಸಬ್ಬತ್‍ದಿವಸ ದೇವಾಲಯಕ್ಕೆ ಬರತಕ್ಕ ಲೇವಿಯರಾಗಲಿ ಯಾಜಕರಾಗಲಿ ಆದ ನಿಮ್ಮಲ್ಲಿ ಮೂರರಲ್ಲೊಂದು ಭಾಗವು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಗ ನೀವು ಮಾಡಬೇಕಾದದ್ದೇನೆಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:4
8 ತಿಳಿವುಗಳ ಹೋಲಿಕೆ  

ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.


ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.


ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು