Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಜಕರೂ ಸೇವೆಯಲ್ಲಿರುವ ಲೇವಿಯರೂ ಹೊರತಾಗಿ ಯಾರೂ ಯೆಹೋವನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಆಜ್ಞಾನುಸಾರವಾಗಿ ಹೊರಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾರನ್ನೂ ದೇವಾಲಯದೊಳಕ್ಕೆ ಬಿಡಬಾರದು. ಶುದ್ಧಮಾಡಲ್ಪಟ್ಟ ಯಾಜಕರು ಮತ್ತು ಲೇವಿಯರು ಮಾತ್ರ ದೇವರ ಸೇವೆಮಾಡುವದಕ್ಕಾಗಿ ಆಲಯದೊಳಗೆ ಬರುವರು. ಉಳಿದವರು ಯೆಹೋವನು ತಮಗೆ ಕೊಟ್ಟ ಕೆಲಸಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:6
4 ತಿಳಿವುಗಳ ಹೋಲಿಕೆ  

ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.


ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು